Delhi, ಮೇ 14 -- ದೆಹಲಿ: ಭಾರತದ ಅತ್ಯುನ್ನತ ಹುದ್ದೆಗಳಿಗೆ ಆಯ್ಕೆ ಮಾಡುವ ಕೇಂದ್ರೀಯ ಲೋಕಸೇವಾ ಆಯೋಗ( UPSC)ದ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್‌ ಅಧಿಕಾರಿ ಅಜಯಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ. ಎರಡು ವಾರದಿಂದ ಕೇಂದ್ರೀಯ ಲೋಕಸೇವಾ ಆಯೋಗದ ಅಧ್ಯಕ್ಷರ ಹುದ್ದೆ ಖಾಲಿ ಇತ್ತು. ಒಂದು ವರ್ಷ ಕಾಲ ಅಧ್ಯಕ್ಷರಾಗಿದ್ದ ಮತ್ತೊಬ್ಬ ಹಿರಿಯ ನಿವೃತ್ ಐಎಎಸ್‌ ಅಧಿಕಾರಿ ಪ್ರೀತಿಸೂಧನ ಅವರ ಅವಧಿ ಕಳೆದ ತಿಂಗಳೇ ಮುಗಿದಿತ್ತು. ಈಗ ಹೊಸ ಅಧ್ಯಕ್ಷರನ್ನು ಯುಪಿಎಸ್ಸಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.ಕೇಂದ್ರ ಸಿಬ್ಬಂದಿ ಸಚಿವಾಲಯ ಮಂಗಳವಾರ ರಾತ್ರಿ ಹೊರಡಿಸಿರುವ ಆದೇಶದ ಪ್ರಕಾರ, ಮಾಜಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರನ್ನು ಮಂಗಳವಾರ ಯುಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಏಪ್ರಿಲ್ 29 ರಂದು ಪ್ರೀತಿಸೂಧನ ಅವರ ಅಧಿಕಾರಾವಧಿ ಪೂರ್ಣಗೊಂಡ ನಂತರ ಕೇಂದ್ರ ಸಾರ್ವಜನಿಕ ಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷರ ಹುದ್ದೆ ಖಾಲಿಯಾಗಿತ್ತು. ಆನಂತರ ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆ ಶುರುವಾಗಿತ್ತ...