New Delhi, ಮಾರ್ಚ್ 11 -- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank Apprentice Recruitment 2025) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಈಗಾಗಲೇ ಆರಂಭಿಸಿದೆ. ಸದ್ಯ ಈ ಹುದ್ದೆಯ ನೋಂದಣಿ ಪ್ರಕ್ರಿಯೆಯ ಗಡುವು ವಿಸ್ತರಿಸಿದ್ದು, ಅರ್ಹ ಅಭ್ಯರ್ಥಿಗಳಿಗೆ ಇನ್ನೂ ಎರಡು ದಿನ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. 2025ರ ಮಾರ್ಚ್ 12ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ (unionbankofindia.co.in) ಮೂಲಕ ಅರ್ಜಿ ಸಲ್ಲಿಸಲು ನೇರ ಲಿಂಕ್ ಅನ್ನು ಬಳಸಬಹುದು.

ಈ ನೇಮಕಾತಿ ಪ್ರಕ್ರಿಯೆ ಮೂಲಕ ಯೂನಿಯನ್‌ ಬ್ಯಾಂಕ್‌ ಬರೋಬ್ಬರಿ 2691 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಹೀಗಾಗಿ ಉದ್ಯೋಗದ ಹುಡುಕಾಟದಲ್ಲಿರುವವರು ತ್ವರಿತವಾಗಿ ಅರ್ಜಿ ಸಲ್ಲಿಸಬಹುದು.

ಸಾಮಾನ್ಯ ಅಥವಾ ಓಬಿಸಿ ಅಭ್ಯರ್ಥಿಗಳಿಗೆ 800 ರೂ. (+ಜಿಎಸ್‌ಟಿ) ಅರ್ಜಿ ಶುಲ್ಕ ನಿಗದಿಯಾಗಿದೆ. ಇದೇ ವೇಳೆ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಮತ್ತು ಮಹಿಳಾ ಅರ್ಜಿ...