Bengaluru, ಮಾರ್ಚ್ 24 -- ಇಕೆ ಎಂಟರ್ಟೈನರ್ಸ್ ಬ್ಯಾನರ್‌ನಲ್ಲಿ ಈ.ಕೃಷ್ಣಪ್ಪ ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಚಿತ್ರ "ಮನದ ಕಡಲು".
ಈ ಬಹುನಿರೀಕ್ಷಿತ ಚಿತ್ರದ ಟ್ರೇಲರ್‌ಅನ್ನು ರಾಕಿಂಗ್ ಸ್ಟಾರ್ ಯಶ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.
ಕಳೆದ ನಾಲ್ಕು ವರ್ಷಗಳಿಂದ ಯಶ್ ಅವರು ಯಾವುದೇ ಸಿನಿಮಾ ಸಮಾರಂಭಗಳಲ್ಲಿ ಪಾಲ್ಗೊಂಡಿರಲಿಲ್ಲ. ಬಹಳ ದಿನಗಳ ನಂತರ ಯಶ್ ಅವರು ಪಾಲ್ಗೊಂಡಿದ್ದ ಸಿನಿಮಾ ಸಮಾರಂಭವಿದು.
ಬೆಂಗಳೂರಿನ ಲುಲು ಮಾಲ್ ಹೊರಾಂಗಣದಲ್ಲಿ ನಡೆದ "ಮನದ ಕಡಲು" ಟ್ರೇಲರ್ ಸಮಾರಂಭಕ್ಕೆ ಯಶ್ ಅವರು ಬರುವುದನ್ನು ತಿಳಿದ ಅಭಿಮಾನಿಗಳು ಮನೆಮಂದಿ ಸಹಿತ ಮಧ್ಯಾಹ್ನದಿಂದಲೇ ಮಾಲ್ ಬಳಿ ಜಮಾಯಿಸಿದ್ದರು.
ಕಣ್ಣು ಹಾಯಿಸಿದಷ್ಟು ಜನರ ಕಡಲು ಅಲ್ಲಿತ್ತು. ವರ್ಣರಂಜಿತ ಸಮಾರಂಭದಲ್ಲಿ ಟ್ರೇಲರ್ ಬಿಡುಗಡೆ ಮಾಡಿದ ಯಶ್, ನಂತರ ತಮ್ಮ ಅದ್ಭುತವಾದ ಮಾತುಗಳ ಮೂಲಕ ಚಿತ್ರತಂಡಕ್ಕೆ ಹಾರೈಸಿದರು.
ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಸಿನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.