ಭಾರತ, ಮೇ 10 -- Ranahaddu Movie Teaser: ಕಳೆದ ನಲವತ್ತು ವರ್ಷಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ಪೋಷಕ ಕಲಾವಿದನಾಗಿ ಪ್ರಸನ್ನಕುಮಾರ್ (ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ ರಣಹದ್ದು ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ಇವರೆ ಚಿತ್ರದ ನಿರ್ಮಾಪಕರು ಕೂಡ. ಪ್ರಸನ್ನಕುಮಾರ್ ಅವರ ಮಕ್ಕಳಾದ ಶಶಾಂಕ್ ಹಾಗೂ ಸೂರಜ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ‌. ಒಬ್ಬ ಮಗ ನಾಯಕನಾಗಿ, ಮತ್ತೊಬ್ಬ ಮಗ ಖಳನಾಯಕನಾಗಿ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ.

ಮೊದಲು ಮಾತನಾಡಿದ ನಿರ್ಮಾಪಕ, ನಿರ್ದೇಶಕ ಪ್ರಸನ್ನಕುಮಾರ್, ಕಳೆದ ನಲವತ್ತು ವರ್ಷಗಳಿಂದ ಕನ್ನಡ ಚಿತ್ರರಂಗ ನನಗೆ ಅನ್ನ ಹಾಕುತ್ತಿದೆ. ಅದಕ್ಕೆ ನಾನು ಹಾಗೂ ನನ್ನ ಕುಟುಂಬ ಚಿರ ಋಣಿ. ಕೆಲವು ವರ್ಷಗಳ ಹಿಂದೆ ಅಪಘಾತದಲ್ಲಿ ನನ್ನ ಕಾಲಿಗೆ ತೀವ್ರ ಪೆಟ್ಟಾಗಿತ್ತು. ಆ ಸಮಯದಲ್ಲಿ ತುಂಬಾ ಯೋಚನೆ ಮಾಡುತ್ತಿದೆ‌. ಸ್ವಲ್ಪ ದಿನಗಳ ನಂತರ ಚಿತ್ರವೊಂದನ್ನು ನಿರ್ಮಾಣದ ಜೊತೆಗೆ...