ಭಾರತ, ಮೇ 8 -- ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧೋನ್ಮಾದ ಹೆಚ್ಚಾದ ಹಿನ್ನೆಲೆ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ 58ನೇ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್​ ನಡೆಯುತ್ತಿದ್ದ ಮ್ಯಾಚ್​​​ನಲ್ಲಿ ಪಂಜಾಬ್​​ ಅದ್ಭುತ ಬ್ಯಾಟಿಂಗ್ ಮಾಡುತ್ತಿತ್ತು. 10.1 ಓವರ್​​ಗಳಲ್ಲಿ 122 ರನ್ ಗಳಿಸಿ 1 ವಿಕೆಟ್ ಕಳೆದುಕೊಂಡಿತ್ತು.

ಪಂದ್ಯ ರದ್ದಾದ ಬೆನ್ನಲ್ಲೇ ಬಿಸಿಸಿಐ ತುರ್ತು ನಡೆಸಿದ್ದು, ಮುಂದಿನ ಪಂದ್ಯಗಳ ಆಯೋಜನೆಗೆ ಸಂಬಂಧಿಸಿ ಐಪಿಎಲ್ ಆಡಳಿತ ಮಂಡಳಿ ಜೊತೆಗೆ ಮಾತುಕತೆ ನಡೆಸಿದೆ.

ಉತ್ತರ ಭಾರತದಲ್ಲಿ ನಡೆಯಲಿರುವ ಪಂದ್ಯಗಳನ್ನು ದಕ್ಷಿಣ ಭಾರತಕ್ಕೆ ಸ್ಥಳಾಂತರ ಮಾಡಬೇಕೇ ಅಥವಾ ಉಳಿದ ಪಂದ್ಯಗಳನ್ನು ರದ್ದುಪಡಿಸಿ ಮರುನಿಗದಿ ಮಾಡಬೇಕೇ ಎನ್ನುವ ಕುರಿತು ಚರ್ಚೆ ನಡೆದಿದೆ ಎಂದು ವರದಿಯಾಗಿದೆ.

ಆದರೆ ಯಾವುದೇ ಅಧಿಕೃತ ನಿರ್ಧಾರ ಕೈಗೊಂಡಿಲ್ಲ. ಮೇ 9ರಂದು ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿ ಮತ್ತೊಂದು ಸುತ್ತಿನ ಸಭೆ ನಡೆಸಲಿದೆ. ಸದ್ಯ ಭಾರತ ಸರ್ಕಾರದೊಂದಿಗ...