ಭಾರತ, ಮೇ 9 -- ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ಲೆಗ್ ಸ್ಪಿನ್ನರ್ ರಶೀದ್ ಖಾನ್ ಪ್ರಸಕ್ತ ಋತುವಿನಲ್ಲಿ ಅತಿ ಹೆಚ್ಚು ಸಿಕ್ಸರ್ ಬಿಟ್ಟುಕೊಟ್ಟ ಬೌಲರ್ ಎಂಬ ಮುಜುಗರದ ದಾಖಲೆಗೆ ಒಳಗಾಗಿದ್ದಾರೆ. ಅಫ್ಘಾನಿಸ್ತಾನದ ರಶೀದ್ 11 ಪಂದ್ಯಗಳಲ್ಲಿ 25 ಸಿಕ್ಸರ್ ನೀಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವೇಗದ ಬೌಲರ್​ ವೇಗದ ಬೌಲರ್ ಖಲೀಲ್ ಅಹ್ಮದ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಖಲೀಲ್ 12 ಪಂದ್ಯಗಳಲ್ಲಿ 24 ಸಿಕ್ಸರ್​​​ಗಳನ್ನು ಚಚ್ಚಿಸಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಭಾಗವಾದ ಶ್ರೀಲಂಕಾದ ವೇಗದ ಬೌಲರ್ ಮತೀಶಾ ಪತಿರಾಣ 10 ಪಂದ್ಯಗಳಲ್ಲಿ 22 ಸಿಕ್ಸರ್ ಬಿಟ್ಟುಕೊಟ್ಟಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ಸ್ಪಿನ್ನರ್ ರವಿ ಬಿಷ್ಣೋಯ್ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಅವರು ಈವರೆಗೆ 10 ಪಂದ್ಯಗಳಲ್ಲಿ 20 ಸಿಕ್ಸರ್ ನೀಡಿದ್ದಾರೆ.

ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಆಡಿದ 11 ಪಂದ್ಯಗಳಲ್ಲಿ 19 ಸಿಕ್ಸರ್​​ ನೀಡಿದ್ದಾರೆ.

Published by HT ...