ಭಾರತ, ಮಾರ್ಚ್ 18 -- ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಅಧಿಕೃತ ಶಿಷ್ಟಾಚಾರ ಸೌಲಭ್ಯಗಳನ್ನು ಬಳಸಿಕೊಂಡು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ನ ಹಸಿರು ಮಾರ್ಗದ ಮೂಲಕ ಹೊರಬರುತ್ತಿದ್ದರು ಎಂದು ತನಿಖೆಗಳಿಂದ ತಿಳಿದು ಬಂದಿದೆ. ಹಿರಿಯ ಐಎಎಸ್‌ ಅಧಿಕಾರಿ ಗೌರವ ಗುಪ್ತ ನೇತೃತ್ವದ ತನಿಖಾ ತಂಡ ವಿಚಾರಣೆ ನಡೆಸುತ್ತಿದ್ದಾಗ ಈ ಸ್ಪೋಟಕ ಅಂಶ ಬೆಳಕಿಗೆ ಬಂದಿದೆ. ಆದರೆ ರನ್ಯಾ ಅವರನ್ನು ರಕ್ಷಿಸಲು ಪೊಲೀಸರು ತಾವಾಗಿಯೇ ಮುಂದಾಗುತ್ತಿದ್ದರೇ ಅಥವಾ ಬೇರೊಬ್ಬರ ಒತ್ತಡಕ್ಕೆ ಕೆಲಸ ಮಾಡುತ್ತಿದ್ದರೇ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಒಂದು ಬಾರಿ ರನ್ಯಾ ಅವರನ್ನು ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಪೊಲೀಸ್‌ ವಾಹನದಲ್ಲಿ ಕರೆ ತಂದಿರುವುದು ಸಾಬೀತಾಗಿದೆ.

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್‌ ಮಲತಂದೆ ಡಿಜಿಪಿ ರಾಮಚಂದ್ರ ರಾವ್‌ ಅವರ ಪಾತ್ರ ಕುರಿತು ಐಎಎಸ್‌ ಅಧಿಕಾರಿ ಗೌರವ ಗುಪ್ತ ನೇತೃತ್ವದ ತನಿಖಾ ತಂಡ ವಿಚಾರಣೆ ನಡೆಸುತ್ತಿರುವ ಸಂ...