ಭಾರತ, ಮಾರ್ಚ್ 8 -- ಬೆಂಗಳೂರು: ಚಿನ್ನ ಕಳ್ಳಸಾಗಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ನಿಯಮಗಳನ್ನು ದುರ್ಬಳಕೆ ಮಾಡಲಾಗುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಶಿಷ್ಟಾಚಾರ ನಿಯಮಗಳನ್ನು ಪರಾಮರ್ಶಿಸಲು ರಾಜ್ಯ ಗೃಹ ಇಲಾಖೆ ನಿರ್ಧರಿಸಿದೆ. ವಿಮಾನ ನಿಲ್ದಾಣದಲ್ಲಿ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ವಿಶೇಷವಾಗಿ, ಪ್ರಭಾವಿ ಹಿನ್ನೆಲೆ ಹೊಂದಿರುವ ವ್ಯಕ್ತಿಗಳಿಗೆ ಕಠಿಣ ಭದ್ರತಾ ಶಿಷ್ಟಾಚಾರಗಳನ್ನು ಪರಿಚಯಿಸಲಾಗಿದೆ. ಇನ್ನು ಮುಂದೆ ಶಿಷ್ಟಾಚಾರ ಸವಲತ್ತುಗಳನ್ನು ಹಿರಿಯ ಅಧಿಕಾರಿಗಳಿಗೆ ಮಾತ್ರ ನೀಡಲಾಗುವುದು. ಹಿರಿಯ ಅಧಿಕಾರಿಗಳು, ಅವರ ಕುಟುಂಬ ವರ್ಗ ಮತ್ತು ಸ್ನೇಹಿತರಿಗೆ ನೀಡುತ್ತಿದ್ದ ಶಿಷ್ಟಾಚಾರವನ್ನು ಇನ್ನು ಮುಂದೆ ರದ್ದುಗೊಳಿಸಲು ಇಲಾಖೆ ತೀರ್ಮಾನಿಸಿದೆ.

ಕೇವಲ ನಿಯೋಜಿತ ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳಿಗೆ ಮಾತ್ರ ಶಿಷ್ಟಾಚಾರ ಲಭ್ಯವಾಗಲಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಬಂಧನದ ಬಳಿಕ ಈ ಕ್ರಮ ವಹಿಸಲಾಗುತ್ತಿದೆ ಎಂದು ಗೃಹ ಇ...