ಭಾರತ, ಮಾರ್ಚ್ 3 -- ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಕೊನೆಯ ಗ್ರೂಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ 44 ರನ್​ಗಳ ಭರ್ಜರಿ ಗೆಲುವು ಸಾಧಿಸಿತು. ಇದರೊಂದಿಗೆ ಅಜೇಯವಾಗಿ ಸೆಮಿಫೈನಲ್​ನಲ್ಲಿ ಕಣಕ್ಕಿಳಿಯಲಿದೆ. ಅಲ್ಲದೆ, ಸೆಮೀಸ್​ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಾರ್ಚ್​ 4ರಂದು ಎದುರಿಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಆದರೆ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಪ್ರಮಾದ ಎಸಗಿದ ರವೀಂದ್ರ ಜಡೇಜಾಗೆ ಅಂಪೈರ್​​ ಎಚ್ಚರಿಕೆ ನೀಡದ ಕುರಿತು ವೀಕ್ಷಕ ವಿವರಣೆಗಾರ ಸೈಮನ್ ಡೌಲ್​ ಕಿಡಿಕಾರಿದ್ದಾರೆ.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ 50 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 249 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 205 ರನ್​ಗಳಿಗೆ ಆಲೌಟ್ ಆಯಿತು. ಪರಿಣಾಮ 44 ರನ್​ಗಳಿಂದ ಶರಣಾಯಿತು. ಆದರೆ ಕಿವೀಸ್ ಚೇಸಿಂಗ್ ಮಾಡುವಾಗ ಅಂದರೆ 33ನೇ ಓವರ್​​ನಲ್ಲಿ ಜಡೇಜಾ ಅ...