ಭಾರತ, ಮಾರ್ಚ್ 3 -- ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಕೊನೆಯ ಗ್ರೂಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ 44 ರನ್ಗಳ ಭರ್ಜರಿ ಗೆಲುವು ಸಾಧಿಸಿತು. ಇದರೊಂದಿಗೆ ಅಜೇಯವಾಗಿ ಸೆಮಿಫೈನಲ್ನಲ್ಲಿ ಕಣಕ್ಕಿಳಿಯಲಿದೆ. ಅಲ್ಲದೆ, ಸೆಮೀಸ್ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಾರ್ಚ್ 4ರಂದು ಎದುರಿಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಆದರೆ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಪ್ರಮಾದ ಎಸಗಿದ ರವೀಂದ್ರ ಜಡೇಜಾಗೆ ಅಂಪೈರ್ ಎಚ್ಚರಿಕೆ ನೀಡದ ಕುರಿತು ವೀಕ್ಷಕ ವಿವರಣೆಗಾರ ಸೈಮನ್ ಡೌಲ್ ಕಿಡಿಕಾರಿದ್ದಾರೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 249 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 205 ರನ್ಗಳಿಗೆ ಆಲೌಟ್ ಆಯಿತು. ಪರಿಣಾಮ 44 ರನ್ಗಳಿಂದ ಶರಣಾಯಿತು. ಆದರೆ ಕಿವೀಸ್ ಚೇಸಿಂಗ್ ಮಾಡುವಾಗ ಅಂದರೆ 33ನೇ ಓವರ್ನಲ್ಲಿ ಜಡೇಜಾ ಅ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.