ಭಾರತ, ಜನವರಿ 20 -- ರಾಮ ಜನ್ಮಭೂಮಿ (Ram Mandir) ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುತ್ತಿರುವ ಬಾಲರಾಮನ ಪ್ರಾಣಪ್ರತಿಷ್ಠಾ ಸಮಾರಂಭಕ್ಕೆ (consecration ceremony of Ram Temple) ಹಲವಾರು ಗಣ್ಯರನ್ನು ಆಹ್ವಾನಿಸಲಾಗಿದೆ. ರಾಜಕೀಯ ನಾಯಕರಿಂದ ಹಿಡಿದು, ಕೈಗಾರಿಕೋದ್ಯಮಿಗಳು, ಕ್ರೀಡಾಪಟುಗಳು ಹಾಗೂ ಸಿನಿರಂಗದ ಸೆಲೆಬ್ರಿಟಿಗಳಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಐತಿಹಾಸಿಕ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದದ ಅಯೋಧ್ಯೆ ಸಜ್ಜಾಗುತ್ತಿದ್ದು, ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಸಾವಿರಾರು ಗಣ್ಯರು ಭಾಗವಹಿಸಲಿದ್ದಾರೆ.

ಜನವರಿ 22ರಂದು ನಡೆಯುವ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಅಯೋಧ್ಯೆಗೆ ಬರುವ ನಿರೀಕ್ಷೆಯಿದೆ. ಈ ನಡುವೆ ಆಹ್ವಾನಿತರ ಪಟ್ಟಿಯಲ್ಲಿ ಭಾರತ ಮತ್ತು ವಿದೇಶಗಳಿಂದ ಸುಮಾರು 7,000 ಅತಿಥಿಗಳು ಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್...