ಭಾರತ, ಮೇ 4 -- ಐಪಿಎಲ್‌ 2025ರ ಆವೃತ್ತಿಯಲ್ಲಿ ರಾಜಸ್ಥಾನ್‌ ರಾಯಲ್ಸ್ ತಂಡದ ಸೋಲಿನ ಸರಪಳಿ ಮುಂದುವರೆದಿದ್ದು, ಕೆಕೆಆರ್‌ ತಂಡ ಮತ್ತೆ ಗೆಲುವಿನ ಹಳಿಗೆ ಮರಳಿದೆ. ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ತವರಿನ ಅಭಿಮಾನಿಗಳ ಮುಂದೆ ಉತ್ತಮ ಪ್ರದರ್ಶನ ನೀಡಿದ ಕೆಕೆಆರ್‌, ಪ್ರಸಕ್ತ ಆವೃತ್ತಿಯ ಟೂರ್ನಿಯಲ್ಲಿ ಆಡಿದ 11ನೇ ಪಂದ್ಯದಲ್ಲಿ 5ನೇ ಗೆಲುವು ಒಲಿಸಿಕೊಂಡಿದೆ. ಇದರೊಂದಿಗೆ ಪ್ಲೇಆಫ್‌ ಪ್ರವೇಶಿಸುವ ಆಸೆ ಜೀವಂತವಾಗಿ ಇರಿಸಿಕೊಂಡಿದೆ. ಅತ್ತ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಆರ್‌ಆರ್‌, ಶತಾಯ ಗತಾಯ ಪ್ರಯತ್ನದ ಹೊರತಾಗಿಯೂ ಮತ್ತೊಮ್ಮೆ ಚೇಸಿಂಗ್‌ನಲ್ಲಿ ಕೂದಲೆಳೆ ಅಂತರದಿಂದ ವಿಫಲವಾಗಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಕೆಕೆಆರ್‌ 4 ವಿಕೆಟ್‌ ಕಳೆದುಕೊಂಡು 206 ರನ್‌ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್‌ ನಡೆಸಿದ ರಾಜಸ್ಥಾನ, ಗುರಿಯ ಸಮೀಪ ಬಂದಿತು. ಆದರೆ, 205 ರನ್‌ ಗಳಿಸಲಷ್ಟೇ ಶಕ್ತವಾಯ್ತು. ಹೀಗಾಗಿ ಕೇವಲ 1 ರನ್‌ ಕೊರತೆಯಿಂದ ಪಂದ್ಯ ಸೋತಿತು.

ಚೇಸಿಂಗ್‌ ವೇಳೆ ನಾಯಕ ರಿಯಾನ್‌ ಪ...