ಭಾರತ, ಮೇ 10 -- ಅತ್ತ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಭಾರತದಾದ್ಯಂತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಪರಿಸ್ಥಿತಿ ಅರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಆಯಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅದರಂತೆಯೇ ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ ಎಂದಿರುವ ಕರ್ನಾಟಕ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನರ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಣಕು ಕಾರ್ಯಾಚರಣೆ (mock drill) ನಡೆಸಲು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರಿಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು, ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರಿಂದ ಮಾಹಿತಿ ಪಡೆದರು. ಈ ವೇಳೆ...