ಭಾರತ, ಏಪ್ರಿಲ್ 14 -- ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.16 ಮತ್ತು 17 ರಂದು ನಡೆಯಲಿದ್ದು, ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏ.15ರಂದು ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಲಿದೆ. ಏ.16ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ ಏ.17ರಂದು ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಹಿಂದೆಂದಿಗಿಂತ ಹೆಚ್ಚು ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ನೇಮಕಾತಿ ಪರೀಕ್ಷೆಗಳಿಗೆ ಮಾಡುವ ಹಾಗೆ ಈ ಪರೀಕ್ಷೆಗೂ ಕ್ಯಾಮರಾ ಕಣ್ಗಾವಲು ಇರುತ್ತದೆ. ವೆಬ್ ಕಾಸ್ಟಿಂಗ್ ಮೂ...