ಭಾರತ, ಮಾರ್ಚ್ 10 -- ಕೊಪ್ಪಳ: ರಾಜ್ಯ ಮಾತ್ರವಲ್ಲದೆ ದೇಶವೇ ತಲೆತಗ್ಗಿಸುವಂತೆ ಮಾಡಿದ ಹಂಪಿ ಬಳಿಯ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಖಚಿತಪಡಿಸಿದ್ದಾರೆ. ಇದರೊಂದಿಗೆ ಪ್ರಕರಣದ ಎಲ್ಲಾ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಂತಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಅತ್ಯಾಚಾರದ ನಂತರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಒಬ್ಬ ಆರೋಪಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ, ಪ್ರವಾಸಕ್ಕೆಂದು ಬಂದಿದ್ದ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ಅತ್ಯಾಚಾರವಾಗಿತ್ತು. "ಮೂವರು ವ್ಯಕ್ತಿಗಳು ಈ ಹೇಯ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಇದು ಆಗಬಾರದಿತ್ತು. ಅವರಲ್ಲಿ ಇಬ್ಬರನ್ನು ಮಾರ್ಚ್ 8ರಂದು ಬಂಧಿಸಲಾಗಿದ್ದು, ಮೂರನೇ ವ್ಯಕ್ತಿಯನ್ನು ಇಂದು (ಭಾನುವಾರ, ಮಾ. 9)ಬಂಧಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ತಂಗಡಗಿ...