ಭಾರತ, ಮಾರ್ಚ್ 26 -- ಬೆಳಗಾವಿ: 2026ರ ಮಾರ್ಚ್‌ ತಿಂಗಳಿಂದ ರಾಜ್ಯದ ಎಲ್ಲಾ ಗರ್ಭಿಣಿಯರಿಗೂ ಜಿಲ್ಲಾವಾರು ಸಾಮೂಹಿಕ ಸೀಮಂತ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಲಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತರಲಿರುವ ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಇದು ಕೂಡ ಒಂದು' ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಗರ ಸಿಪಿಎಡ್ ಮೈದಾನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.

'ಸೀಮಂತವೂ ಭಾರತದ ಸಂಸ್ಕೃತಿಯ ಭಾಗ, ಗರ್ಭಿಣಿ ಆರೋಗ್ಯವಾಗಿದ್ದರೆ ಮಗು ಕೂಡ ಆರೋಗ್ಯವಂತವಾಗಿ ಜನಿಸುತ್ತದೆ. ಸಾಮೂಹಿಕ ಸೀಮಂತದಂತಹ ಕಾರ್ಯಕ್ರಮಗಳ ಮೂಲಕ ಗರ್ಭಿಣಿಯರು ಹಾಗೂ ಅವರಿಗೆ ಹುಟ್ಟಲಿರುವ ಮಗುವಿನ ಬಗ್ಗೆ ಸರ್ಕಾರ ಕಾಳಜಿ ತೋರಲು ಮುಂದಾಗಿದೆ. ಗರ್ಭಿಣ...