ಭಾರತ, ಮಾರ್ಚ್ 18 -- ಬೆಂಗಳೂರು: ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಪ್ರತಿಷ್ಠಿತ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಪರ ಘೋಷಣೆಗಳು ಬರೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಕೃತ್ಯವನ್ನು ಯಾರು, ಯಾವ ಕಾರಣಕ್ಕೆ ಮಾಡಿದ್ದಾರೆ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಪಾಕಿಸ್ತಾನ ಪರ ಘೋಷಣೆ ಬರೆದಿರುವ ಜೊತೆಗೆ ಕನ್ನಡಿಗರನ್ನೂ ನಿಂದಿಸಿದ್ದಾರೆ. ಇದು ಆಗ ಆಕ್ರೋಶಕ್ಕೆ ಕಾರಣವಾಗಿದೆ. ಮಾತ್ರವಲ್ಲ ಈ ವಿಚಾರ ಸದನದಲ್ಲೂ ಚರ್ಚೆಯಾಗಿದೆ. ಕೃತ್ಯಕ್ಕೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿದ ಕಂಪನಿ, ತನ್ನ ಉದ್ಯೋಗಿಗಳಿಗೆ ಎಚ್ಚರಿಕೆ ನೀಡಿದೆ.

'ಪಾಕಿಸ್ತಾನಕ್ಕೆ ಜೈ' ಎಂದು ಬರೆದಿರುವ ಜೊತೆಗೆ ಅವಾಚ್ಯ ಶಬ್ದಗಳಿಂದ ಕನ್ನಡಿಗರನ್ನು ನಿಂದಿಸಿದ್ದಾರೆ. ಇದನ್ನು ಯಾರು ಯಾವಾಗ ಬರೆದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬಿಡದಿಯ ಪ್ರತಿಷ್ಠಿತ ಕಂಪನಿಯ ಶೌಚಾಲಯದ ಗೋಡೆ ಮೇಲೆ ಬರೆದಿರುವ ಈ ಕೃತ್ಯವು ಮಾರ್ಚ್ 15 ರಂದು ಈ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಂಪನಿಯು ಸುತ್ತೋಲೆ ಹೊರಡಿಸಿದ್ದು, ಈ ಕೃತ್ಯವನ್ನು ಯಾರೇ ಮಾಡಿದ್...