ಭಾರತ, ಫೆಬ್ರವರಿ 6 -- ರಾಯಚೂರು: ಜಿಲ್ಲೆಯ ಮಾನವಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸಂಬಂಧಿಸಿ ಶಾಲಾ ವ್ಯವಸ್ಥಾಪಕನನ್ನೂ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ರಾಯಚೂರು ಮಾನವಿಯಲ್ಲಿ 2ನೇ ತರಗತಿಯ ವಿದ್ಯಾರ್ಥಿನಿ 8 ವರ್ಷದ ಬಾಲಕಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಬುಧವಾರ (ಫೆ 5) ನಡೆದಿದೆ. ಈ ಕುರಿತು ಕೇಸ್ ದಾಖಲಿಸಿಕೊಂಡ ಪೊಲೀಸರು, ಆರೋಪಿ ಶಿವನಗೌಡ ಮತ್ತು ಖಾಸಗಿ ಶಾಲೆಯ ವ್ಯವಸ್ಥಾಪಕ ರಾಜು ತಾಳಿಕೋಟೆಯನ್ನು ಬಂಧಿಸಿರುವುದಾಗಿ ಎಸ್‌ಪಿ ಪುಟ್ಟ ಮಾದಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಆರೋಪಿ ಶಿವನಗೌಡ ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೆ. ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ರಿಮ್ಸ್‌ನಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎ...