Bengaluru, ಮೇ 25 -- ದೆಹಲಿ: ಭಾನುವಾರ ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ದೆಹಲಿಯ ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಮಳೆ, ಬಲವಾದ ಗಾಳಿ ಮತ್ತು ಸಂಚಾರ ದಟ್ಟಣೆಯಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. ಭಾನುವಾರ ಬೆಳಿಗ್ಗೆ ದೆಹಲಿಯಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಿದ್ದು, ಗುಡುಗು ಸಹಿತ ಮಳೆಯಾಗಿದೆ. ತಾಪಮಾನವು 21.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹವಾಮಾನ ಇಲಾಖೆ ಶನಿವಾರ ದೆಹಲಿ ಮತ್ತು ಹತ್ತಿರದ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರಿ ಗುಡುಗು, ಬಲವಾದ ಗಾಳಿ ಮತ್ತು ಮಿಂಚಿನ ಬಗ್ಗೆ ನಿವಾಸಿಗಳಿಗೆ ಎಚ್ಚರಿಕೆ ನೀಡಿತ್ತು. ಭಾರೀ ಮಳೆಯಿಂದಾಗಿ ರಾಷ್ಟ್ರ ರಾಜಧಾನಿಯ ವಿವಿಧ ಭಾಗಗಳಲ್ಲಿ ನೀರು ತುಂಬಿಕೊಂಡಿದೆ. ಜತೆಗೆ ಕೆಲವು ಸ್ಥಳಗಳಲ್ಲಿ, ನೀರಿನ ಮಟ್ಟವು ರಸ್ತೆಯಲ್ಲಿ ಸಣ್ಣ ವಾಹನಗಳನ್ನು ಮುಳುಗಿಸುವಷ್ಟು ಹೆಚ್ಚಾಗಿದೆ.
ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.