Bangalore, ಮೇ 23 -- ಕಾಂತಾರ ಸಿನಿಮಾದ ಯಶಸ್ಸಿನ ಬಳಿಕ ಚಾಪ್ಟರ್‌ ಒಂದರ ಬಿಡುಗಡೆಗೆ ಎಲ್ಲರೂ ಕಾಯುತ್ತಿದ್ದಾರೆ. ಈ ಕನ್ನಡ ಚಿತ್ರದ ಬಿಡುಗಡೆಗೆ ಪ್ಯಾನ್‌ ಇಂಡಿಯಾ ಪ್ರೇಕ್ಷಕರು ಕಾಯುತ್ತಿದ್ದಾರೆ. ರಿಷಬ್‌ ಶೆಟ್ಟಿ ನಟನೆಯ ಈ ಚಿತ್ರದ ಸಂಪೂರ್ಣ ತಾರಾಗಣದ ವಿವರ ಇನ್ನೂ ಬಹಿರಂಗವಾಗಿಲ್ಲ. ಈ ಚಿತ್ರದ ಕುರಿತಾದ ಊಹಾಪೋಹಾಗಳಿಗ ಹೊಂಬಾಳೆ ಫಿಲಂಸ್‌ ಸ್ಪಷ್ಟನೆ ನೀಡಿದೆ.

ಕಾಂತಾರಾ ಚಾಪ್ಟರ್ 1" ಬಿಡುಗಡೆ ದಿನಾಂಕವನ್ನು ಅಕ್ಟೋಬರ್ 2, 2025 ಕ್ಕೆ ನಿಗದಿಪಡಿಸಲಾಗಿದೆ ಎಂದು ಹೊಂಬಾಳೆ ಫಿಲಂಸ್ ಈಗಾಗಲೇ ಘೋಷಿಸಿತ್ತು. ಆದರೆ ಇತ್ತೀಚೆಗೆ ಈ ದಿನಾಂಕದ ಬಗ್ಗೆ ಕೆಲವು ಊಹಾಪೋಹಗಳು ಹರಡಿದ್ದವು‌.

ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಹೊಂಬಾಳೆ ಫಿಲಂಸ್ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಧಿಕೃತವಾಗಿ ಸ್ಪಷ್ಟ ಪಡಿಸಿದೆ.

ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ. ಹಿಂದಿನ "ಕಾಂತಾರ" ಚಿತ್ರದ ಯಶಸ್ಸಿನ ನಂತರ "ಕಾಂತಾರ ಚಾಪ್ಟರ್ 1" ಸಹ ಪ್ರೇಕ್ಷಕರನ್ನು ಮತ್ತಷ್ಟು ಆಳವಾದ ಕಥೆ, ಸಂಸ್ಕೃತಿ ಮತ್ತು ದೈವಿಕ ...