Bangalore, ಮಾರ್ಚ್ 20 -- ಬೆಂಗಳೂರು: ನಮ್ಮ ನಾಡು ಹಲವಾರು ಜನಪದ ಕಲೆಗಳ ಇತಿಹಾಸ ಹೊಂದಿದೆ. ಇತ್ತೀಚೆಗೆ ಕಾಂತಾರ ಚಿತ್ರದಲ್ಲಿ ಕರಾವಳಿ ಭಾಗದ ದೈವಾರಾಧನೆ, ಆಚರಣೆ ಬಗ್ಗೆ ಹೇಳಲಾಗಿತ್ತು. ಅದೇರೀತಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಜನಪ್ರಿಯವಾಗಿರುವ ವೀರಗಾಸೆ ಕಲೆ ಹಾಗೂ ಅದರ ಅಧಿದೇವರಾದ ವೀರಭದ್ರ ದೇವರ ಇತಿಹಾಸವನ್ನು ಹೇಳುವ ಚಿತ್ರವೊಂದು ತೆರೆಗೆ ಬರಲು ಸಿದ್ದವಾಗುತ್ತಿದೆ. ಅದರ ಹೆಸರು ರುದ್ರಾಭಿಷೇಕಂ. ವೀರಗಾಸೆ ಕುಟುಂಬವೊಂದನ್ನು ಹಿನ್ನೆಲೆಯಾಗಿಟ್ಟುಕೊಂಡು ಆ ಕಲೆಯ ಮೂಲ, ಆ ಕಲಾವಿದರ ಇತಿಹಾಸವನ್ನು ಕಮರ್ಷಿಯಲ್ ಕಥೆಯ ಮೂಲಕ ನಿರ್ದೇಶಕ ವಸಂತ್ ಕುಮಾರ್ ಅವರು ರುದ್ರಾಭಿಷೇಕಂ ಚಿತ್ರದಲ್ಲಿ ಹೇಳಹೊರಟಿದ್ದಾರೆ. ಚಿಕ್ಕಬಳ್ಳಾಪುರದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಸೀನ್ ಹಾಗೂ ದೇವನಹಳ್ಳಿಯ ಚಿಕ್ಕತದಮಂಗಲ ಗ್ರಾಮದಲ್ಲಿ ಸೆಟ್ ಹಾಕಿ ನಾಡಿನ ಮೂಲೆ ಮೂಲೆಯಿಂದ ಆಗಮಿಸಿದ ವೀರಗಾಸೆ ಕಲಾವಿದರನ್ನಿಟ್ಟುಕೊಂಡು ಕ್ಲೈಮ್ಯಾಕ್ಸ್ ಹಾಡಿನ ಚಿತ್ರೀಕರಣ ನಡೆಸಲಾಗುತ್ತಿದೆ.

"ಫ್ಯಾನ್ ಇಂಡಿಯಾ ಸಂಸ್ಥೆಯ ಮೊ...