ಭಾರತ, ಮೇ 18 -- ರೆಟ್ರೋ ಎಂಬ ತಮಿಳು ಸಿನಿಮಾದಲ್ಲಿ ಸೂರ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಇತ್ತೀಚೆಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಇದು ಪಿಜ್ಜಾ ಸಿನಿಮಾದ ಖ್ಯಾತಿಯ ಕಾರ್ತಿಕ್‌ ಸುಬ್ಬರಾಜ್‌ ನಿರ್ದೇಶನದ ಸಿನಿಮಾವಾಗಿದೆ. ಈ ರೋಮ್ಯಾಂಟಿಕ್ ಆಕ್ಷನ್‌ ಡ್ರಾಮಾವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದಗ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಒಂದು ತಿಂಗಳ ಬಳಿಕ ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ರೆಟ್ರೋ ಸಿನಿಮಾ ಬಿಡುಗಡೆಯಾಲಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.

ಸೂರ್ಯ ನಟನೆಯ ಈ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಈಗಾಗಲೇ ಖಚಿತವಾಗಿತ್ತು. ನೆಟ್‌ಫ್ಲಿಕ್ಸ್‌ ಈ ಸಿನಿಮಾದ ಒಟಿಟಿ ಹಕ್ಕುಗಳನ್ನು ತನ್ನದಾಗಿಸಿಕೊಂಡಿತ್ತು. ರೆಟ್ರೋ ಸಿನಿಮಾವು ಮೇ 1ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈಗಲೂ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ. ಕೆಲವು ವರದಿಗಳ ಪ್ರಕಾರ ಜೂನ್‌ 5ರಂದು ನೆಟ್‌ಫ್ಲಿಕ್ಸ್‌ನಲ್ಲಿ ರೆಟ್ರೋ ಸಿನಿಮಾ ಸ್ಟ...