ಭಾರತ, ಫೆಬ್ರವರಿ 1 -- ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಂ 2 ಆಗಿರುವ ನಟ ದರ್ಶನ್ ಅವರಿಗೆ ಮೈಸೂರು ಜಿಲ್ಲೆಗೆ ತೆರಳುವುದಕ್ಕೆ ನೀಡಿದ್ದ ಅನುಮತಿಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಮತ್ತೆ ವಿಸ್ತರಿಸಿ ಆದೇಶಿಸಿದೆ. ಬೆನ್ನು ನೋವಿಗೆ ಮೈಸೂರಿನ ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಅಲ್ಲಿಗೆ ತೆರಳಲು ನೀಡಿದ್ದ ಅನುಮತಿಯನ್ನು ಮುಂದುವರೆಸುವಂತೆ ದರ್ಶನ್ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ನ್ಯಾಯಾಲಯವು ಈ ಅವಧಿಯನ್ನು ಮತ್ತೆ ಫೆಬ್ರುವರಿ 10ರವರೆಗೆ ವಿಸ್ತರಣೆ ಮಾಡಿದೆ.
ಕೊಲೆ ಪ್ರಕರಣದಲ್ಲಿ ಆರು ತಿಂಗಳು ಜೈಲಿನಲ್ಲಿದ್ದ ದರ್ಶನ್ ಅವರು ಹೈಕೋರ್ಟ್ನಿಂದ ರೆಗ್ಯುಲರ್ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು.
ಬಿಡುಗಡೆಯಾದ ಮೇಲೆ ಮೈಸೂರಿಗೆ ತೆರಳುವುದಕ್ಕೆ ಅನುಮತಿ ಕೋರಿದ್ದರು. ಆಗ ನ್ಯಾಯಾಲಯ ಅನುಮತಿ ನೀಡಿತ್ತು. ಅವಧಿ ಮುಕ್ತಾಯವಾದ ನಂತರ ಮತ್ತೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಅರ್ಜಿಯನ್ನು ಪುರಸ್ಕರಿಸಿದೆ.
ಬೃಹತ್ ಬೆಂಗಳೂರು ಮಹಾನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.