Bangalore, ಮೇ 1 -- ಬೆಂಗಳೂರು:ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ಅಂತ್ಯದವರೆಗೆ ಖರೀದಿ ಮಾಡಲಾಗುವುದು. ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ ಕಾರಣ ಖರೀದಿ ಅವಧಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮತಿ ನೀಡಿದ್ದು, ಇದುವರೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ 1.83 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ. ಇನ್ನೂ 2.70 ಲಕ್ಷ ಮೆಟ್ರಿಕ್ ಟನ್ ಪ್ರಮಾಣದಷ್ಟು ತೊಗರಿಯನ್ನು ರೈತರು ನೋಂದಣಿ ಮಾಡಿಸಿಕೊಂಡಿದ್ದು, ಇನ್ನೂ ಸುಮಾರು 93 ಸಾವಿರ ಮೆಟ್ರಿಕ್ ಟನ್ ಖರೀದಿ ಮಾಡಬೇಕಾಗಿದೆ ಎಂದು ಕೃಷಿ ಮಾರುಕಟ್ಟೆ, ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ ಟನ್ ತೊಗರಗೆಗೆ 7,550 ರೂ. ನಿಗದಿಪಡಿಸಿದ್ದು, ಈ ಬೆಲೆ ಕಡಿಮೆಯಾಗಿದ್ದು, ಹೆಚ್ಚಳ ಮಾಡ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.