ಭಾರತ, ಏಪ್ರಿಲ್ 24 -- ತವರು ಮೈದಾನ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ತಂಡ ಕೊನೆಗೂ ಈ ಬಾರಿಯ ಐಪಿಎಲ್‌ನಲ್ಲಿ ಮೊದಲ ಗೆಲುವು ಸಾಧಿಸಿದೆ. ಈವರೆಗೆ ಆಡಿದ ಸತತ ಮೂರು ಪಂದ್ಯಗಳಲ್ಲಿ ಮುಗ್ಗರಿಸಿದ್ದ ತಂಡವು, ರಾಜಸ್ಥಾನ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡುವ ಮೂಲಕ ತವರು ಅಭಿಮಾನಿಗಳಿಗೆ ಮೊದಲ ಗೆಲುವಿನ ಸಿಹಿ ಉಣಿಸಿದೆ. ತವರಿನಲ್ಲಿ ಸತತ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ತಂಡ, ನಾಲ್ಕನೇ ಪ್ರಯತ್ನದಲ್ಲಿ ಎದುರಾಳಿ ತಂಡವನ್ನು ಕಟ್ಟಿಹಾಕಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 205 ರನ್‌ ಗಳಿಸಿತು. ಇದಕ್ಕೆ ಪ್ರತಿಯಾಗಿ ರಾಜಸ್ಥಾನ ತಂಡ 9 ವಿಕೆಟ್‌ ನಷ್ಟಕ್ಕೆ 194 ರನ್‌ ಗಳಿಸಿ 11 ರನ್‌ಗಳಿಂದ ಸೋತಿತು. ಚೇಸಿಂಗ್‌ ನಡೆಸಿದ ರಾಜಸ್ಥಾನ, ಒಂದು ಹಂತದಲ್ಲಿ ಗೆಲುವಿನ ದಡದಲ್ಲೇ ಇತ್ತು. ಆದರೆ, ಕೊನೆಯ ಎರಡು ಓವರ್‌ಗಳಲ್ಲಿ ಪಂದ್ಯದ ಗತಿಯೇ ಬದಲಾಯ್ತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ, ಆರಂಭದಿಂದಲೇ ಸ್...