ಭಾರತ, ಮಾರ್ಚ್ 30 -- ಐಪಿಎಲ್‌ 18ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಸತತ ಎರಡನೇ ಸೋಲು ಕಂಡಿದೆ. ಅತ್ತ ಸತತ ಎರಡು ಸೋಲುಗಳಿಂದ ಕಂಗೆಟ್ಟಿದ್ದ ರಾಜಸ್ಥಾನ್‌ ರಾಯಲ್ಸ್‌ ತಂಡವು, ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಗುವಾಹಟಿಯಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಕೊನೆಗೂ ರಾಜಸ್ಥಾನ್‌ ರಾಯಲ್ಸ್‌ ತಂಡ ಗೆದ್ದು ಬೀಗಿದೆ. ಕೊನೆಯ ಓವರ್‌ನ ಕೊನೆಯ ಎಸೆತದವರೆಗೂ ಸಾಗಿದ ಪಂದ್ಯದಲ್ಲಿ ಸಿಎಸ್‌ಕೆ ವೀರೋಚಿತ ಸೋಲು ಕಂಡಿದೆ. ಕೊನೆಯ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧದ ಸೋಲಿನಿಂದ ಹೊರಬರಲು ಯತ್ನಿಸಿದ್ದ ಚೆನ್ನೈ ತಂಡಕ್ಕೆ, ಮತ್ತೊಂದು ಸೋಲು ಎದುರಾಗಿದೆ. ಗೆಲುವಿನೊಂದಿಗೆ ರಾಯಲ್ಸ್‌ ತಂಡವು ಅಂಕಪಟ್ಟಿಯಲ್ಲಿ ಖಾತೆ ತೆರೆದಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ರಾಜಸ್ಥಾನ್‌ ರಾಯಲ್ಸ್, ನಿತೀಶ್‌ ರಾಣಾ ಆಕರ್ಷಕ ಅರ್ಧಶತಕದ ನೆರವಿಂದ 9 ವಿಕೆಟ್‌ ನಷ್ಟಕ್ಕೆ 182 ರನ್‌ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್‌ ನಡೆಸಿದ ಸಿಎಸ್‌ಕೆ, 6 ವಿಕೆಟ್‌ ಕಳೆದುಕೊಂಡು 176 ರನ್‌ ಗಳಿಸಲಷ್ಟೇ ಶಕ್ತವಾಯ್ತು....