ಬೆಂಗಳೂರು, ಮೇ 14 -- ಆರ್ ಅಶ್ವಿನ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದಾರೆ. ಅವರ ಬೆನ್ನಲ್ಲೇ ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಕೂಡಾ ಟೆಸ್ಟ್ ವೃತ್ತಿಜೀವನಕ್ಕೆ ವಿದಾಯ ಹೇಳುವ ಸಾಧ್ಯತೆ ಇದೆ ಎಂದ ಮಾಧ್ಯಮಕ್ಕೆ ಶಮಿ ತರಾಟೆಗೆ ತೆಗೆದುಕೊಂಡಿದ್ದಾರೆ. ಐಪಿಎಲ್ 2025ರ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಆಡುತ್ತಿರುವ ಶಮಿ, ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಕುರಿತು ಬರೆದು ಪೋಸ್ಟ್ ಮಾಡಿದ್ದಾರೆ. ಕ್ರಿಕೆಟ್‌ನ ದೀರ್ಘ ಸ್ವರೂಪದಲ್ಲಿ ಮತ್ತಷ್ಟು ಕಾಲ ಆಡಲಿದ್ದು, ಶೀಘ್ರದಲ್ಲೇ ಎಲ್ಲಿಯೂ ಹೋಗುವುದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಸುದೀರ್ಘ ಸ್ವರೂಪದಿಂದ ಹಿಂದೆ ಸರಿದ ನಂತರ ಶಮಿ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ವಿದಾಯ ಹೇಳುವ ಸಾಧ್ಯತೆಯಿದೆ ಎಂದು ವೇಗದ ಬೌಲರ್ ಅನ್ನು ಗುರಿಯಾಗಿಸಿಕೊಂಡ ವರದಿ ಹೇಳಿತ್ತು. ಆದರೆ ಅದಕ್ಕೆ ಖುದ್ದು ಶಮಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
ಐಸಿಸಿ ಪುರುಷರ ಚಾಂಪಿಯನ...
Click here to read full article from source
To read the full article or to get the complete feed from this publication, please
Contact Us.