ಭಾರತ, ಮಾರ್ಚ್ 15 -- ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಗೆದ್ದ ನಂತರ ರೋಹಿತ್ ಶರ್ಮಾ ಅವರ ಟೆಸ್ಟ್ ನಾಯಕತ್ವಕ್ಕೂ ಜೀವ ಬಂದಿದೆ. ಜೂನ್ ಮತ್ತು ಆಗಸ್ಟ್ ನಡುವೆ ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್​ ಪಂದ್ಯಗಳ ಸರಣಿಯಲ್ಲಿ ರೋಹಿತ್ ಶರ್ಮಾ ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾದ ವಿರುದ್ಧ ಹಿಟ್​ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ನೀಡಿತ್ತು. ಇದಾದ ಬಳಿಕ ರೋಹಿತ್ ನಾಯಕತ್ವದ ಬಗ್ಗೆ ಪ್ರಶ್ನೆ ಎದ್ದಿತ್ತು.

ಬಿಜಿಟಿ ಸರಣಿ ಸೋತ ನಂತರ ಕೊನೆಯ ಸಿಡ್ನಿ ಟೆಸ್ಟ್​ಗೆ ತಂಡದಿಂದ ಹೊರಗುಳಿದಿದ್ದರು. ಈ ಟೆಸ್ಟ್​​ನಲ್ಲಿ ಜಸ್ಪ್ರೀತ್ ಬುಮ್ರಾ ಭಾರತದ ಉಸ್ತುವಾರಿ ವಹಿಸಿಕೊಂಡಿದ್ದರು. ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ, ರೋಹಿತ್​ಗೆ ಬಿಸಿಸಿಐನ ಸಂಪೂರ್ಣ ಬೆಂಬಲ ಸಿಕ್ಕಿದೆ. ಇಂಡಿಯನ್ ಎಕ್ಸ್​ಪ್ರೆಸ್​ ಪ್ರಕಾರ, ಮಂಡಳಿ ಮತ್ತು ಆಯ್ಕೆದಾರರು ರೋಹಿತ್​​ರನ್ನು ಮತ್ತೊಂದು ದೊಡ್ಡ ಪ್ರವಾಸಕ್ಕೆ ನಾಯಕನಾಗಿ ಕಳುಹಿಸಲು ನಿರ್ಧರಿಸಿದ್ದಾರೆ. ಹೀಗಾ...