Bengaluru, ಮೇ 4 -- ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಧರ್ಮಶಾಲಾದ ಸುಂದರ ಮೈದಾನದಲ್ಲಿ ತವರಿನ ಅಭಿಮಾನಿಗಳ ಬೆಂಬಲದೊಂದಿಗೆ ಅಬ್ಬರಿಸಿದ ಶ್ರೇಯಸ್ ಅಯ್ಯರ್ ಪಡೆ, ಪ್ಲೇಆಫ್ ಹಂತಕ್ಕೆ ಮತ್ತಷ್ಟು ಹತ್ತಿರವಾಗಿದೆ. ಅತ್ತ ಎಲ್ಎಸ್ಜಿ ತಂಡ ಸತತ ಮೂರನೇ ಸೋಲಿಗೆ ಶರಣಾಗಿದ್ದು, ತಂಡದ ಪ್ಲೇಆಫ್ ಹಾದಿ ದುರ್ಗಮವಾಗಿದೆ. ಮುಂದಿನ 3 ಪಂದ್ಯಗಳು ಲಕ್ನೋ ಪಾಲಿಗೆ ಮಾಡು ಇಲ್ಲವೆ ಮಡಿ ಎಂಬಂತಾಗಲಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ಕಿಂಗ್ಸ್, ಪ್ರಭ್ಸಿಮ್ರಾನ್ ಸಿಂಗ್ ಸ್ಫೋಟಕ ಆಟದ ನೆರವಿಂದ 5 ವಿಕೆಟ್ ಕಳೆದುಕೊಂಡು 236 ರನ್ ಸಿಡಿಸಿತು. ಇದಕ್ಕೆ ಪ್ರತಿಯಾಗಿ ಗುರಿ ಬೆನ್ನಟ್ಟಿದ ಲಕ್ನೋ, ಆಯುಶ್ ಬದೋನಿ ಆಕರ್ಷಕ ಆಟದ ಹೊರತಾಗಿಯೂ 199 ರನ್ ಗಳಿಸಲಷ್ಟೇ ಶಕ್ತವಾಯ್ತು. ಇದರೊಂದಿಗೆ ಪಂಜಾಬ್ ತಂಡವು 37 ರನ್ಗಳಿಂದ ಭರ್ಜರಿಯಾಗಿ ಗೆದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ನೆಗೆಯಿತು. ಅರ್ಸಿಬಿ ತಂಡ ಅಗ್ರಸ್ಥಾನದಲ್ಲಿ ಭದ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.