ಭಾರತ, ಏಪ್ರಿಲ್ 4 -- ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ (ಏಪ್ರಿಲ್ 4) ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಪಂದ್ಯದಲ್ಲಿ ಮಾರಕ ಬೌಲಿಂಗ್ ದಾಳಿ ನಡೆಸಿದ ಆಲ್ರೌಂಡರ್, ಐದು ವಿಕೆಟ್ ಪಡೆದು ಎಲ್ಎಸ್ಜಿ ತಂಡವನ್ನು ಕಾಡಿದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 5 ವಿಕೆಟ್ ಗೊಂಚಲು ಪಡೆದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರಾದರು.
ಲಕ್ನೋ ತಂಡದ ಪ್ರಬಲ ಆಟಗಾರರಾದ ನಿಕೋಲಸ್ ಪೂರನ್, ರಿಷಭ್ ಪಂತ್, ಐಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್ ಮತ್ತು ಆಕಾಶ್ ದೀಪ್ ವಿಕೆಟ್ ಕಬಳಿಸಿದ ಹಾರ್ದಿಕ್, ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. 36 ರನ್ ಬಿಟ್ಟುಕೊಟ್ಟು 5 ವಿಕೆಟ್ ಪಡೆದ ಹಾರ್ದಿಕ್ ಪಾಂಡ್ಯ, ಟಿ20 ಕ್ರಿಕೆಟ್ನಲ್ಲಿ ಅತ್ಯುತ್ತಮ ಅಂಕಿ-ಅಂಶ ದಾಖಲಿಸಿದರು. ಈ ಹಿಂದೆ 2023ರಲ್ಲಿ ಅಹಮದಾಬಾದ್ನಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.