ಭಾರತ, ಮಾರ್ಚ್ 31 -- ಐಪಿಎಲ್‌ 18ನೇ ಆವೃತ್ತಿಯ ಪಂದ್ಯಗಳು ದಿನಕಳೆದಂತೆ ಕುತೂಹಲ ಹೆಚ್ಚಿಸುತ್ತಿವೆ. ಪಂದ್ಯಾವಳಿಯಲ್ಲಿ ನಾಳೆ (ಏಪ್ರಿಲ್‌ 1) ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿವೆ. ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು, ಲಕ್ನೋ ತಂಡಕ್ಕೆ ತವರಿನ ಅಭಿಮಾನಿಗಳ ಬೆಂಬಲ ಸಿಗಲಿದೆ. ಪ್ರಸಕ್ತ ಆವೃತ್ತಿಯಲ್ಲಿ ಈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದೆ. ಎಂದಿನಂತೆ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.

ಈ ಬಾರಿ ರಿಷಭ್ ಪಂತ್ ನಾಯಕತ್ವದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ಎಲ್‌ಎಸ್‌ಜಿ, ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿತು. ಆ ನಂತರ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಸುಲಭ ಚೇಸಿಂಗ್‌ ಮಾಡಿ ಗೆದ್ದಿತ್ತು. ಸದ್ಯ ಪಂತ್‌ ಪಡೆ ಐಪಿಎಲ್‌ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಟೂರ್ನಿಯಲ್ಲಿ ಕೇವಲ ಒಂದು ಪಂದ್ಯವಾಡಿ ಗೆದ...