Bengaluru, ಮೇ 27 -- ಲಂಡನ್: ಇಂಗ್ಲೆಂಡ್‌ನಲ್ಲಿ ಲಿವರ್‌ಪೂಲ್‌ನ ಪ್ರೀಮಿಯರ್ ಲೀಗ್ ವಿಜಯೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ಜನರ ಗುಂಪಿಗೆ ಕಾರು ನುಗ್ಗಿಸಿದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಕನಿಷ್ಠ 50 ಜನರು ಗಾಯಗೊಂಡಿದ್ದಾರೆ. ಮಕ್ಕಳಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪಿಎ ಮೀಡಿಯಾ ವರದಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿ 53 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ತಮ್ಮ ನೆಚ್ಚಿನ ಫುಟ್‌ಬಾಲ್ ತಂಡದ ವಿಜಯೋತ್ಸವವನ್ನು ಆಚರಿಸಲು ಜನರು ಸೇರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಕೂಡ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಜನರ ಗುಂಪಿನ ಮೇಲೆ ಕಾರು ಏಕಾಏಕಿ ನುಗ್ಗಿದ್ದರಿಂದ ಹಲವರು ಗಾಯಗೊಂಡಿದ್ದಾರೆ. ಆ ಪೈಕಿ 27 ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿದ್ದು, 20 ಜನರಿಗೆ ಘಟನಾ ಸ್ಥಳದಲ್ಲಿ ಚಿಕಿತ್ಸೆ ನೀಡಲಾಯಿತು, ಗಾಯಗೊಂಡವರಲ್ಲಿ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯಲ್ಪಟ್ಟವರಲ್ಲಿ ಒಬ್ಬ ಮಗು ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲ...