ಭಾರತ, ಮೇ 27 -- ಬೆಂಗಳೂರು: ಕರ್ನಾಟಕದ ಶತಮಾನದ ಇತಿಹಾಸವುಳ್ಳ ಮೈಸೂರು ಸ್ಯಾಂಡಲ್ ಸೋಪು ಬ್ರಾಂಡ್ ರಾಯಭಾರಿಯಾಗಿ ಹೊರ ರಾಜ್ಯದವರನ್ನು ನೇಮಿಸಿದ ವಿಚಾರದಲ್ಲಿ ವಿವಾದ ಇರುವ ನಡುವೆಯೇ ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲು ನಿರ್ಧರಿಸಲಾಗಿದೆ.ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.