ಭಾರತ, ಮಾರ್ಚ್ 17 -- ಬೆಂಗಳೂರು: ವಯೋವೃದ್ಧ ಅತ್ತೆ ಹಾಗೂ ಮಾವನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶಿನಿ ಎನ್‌. ಅವರಿಗೆ ಬಿಎಂಸಿಆರ್‌ಐ ಡೀನ್ ಡಾ. ರಮೇಶ್ ಕೃಷ್ಣ ಶೋಕಾಸ್ ನೋಟಿಸ್‌ ನೀಡಿದ್ದಾರೆ.

ಡಾ. ಪ್ರಿಯದರ್ಶಿನಿ ತಮ್ಮ ಅತ್ತೆ, ಮಾವನ ಮೇಲೆ ಹಲ್ಲೆ ಮಾಡಿದ ವಿಡಿಯೊ ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಡಾ.ಪ್ರಿಯದರ್ಶಿನಿ ಅವರ ಮಾವ ಜೆ. ನರಸಿಂಹಯ್ಯ ಅವರು ಸೊಸೆ ವಿರುದ್ಧ ದೂರು ಸಲ್ಲಿಸಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಇ.ಎಸ್‌.ಐ ಆಸ್ಪತ್ರೆಯ ದಂತ ವೈದ್ಯ ನವೀನ್ ಕುಮಾರ್ ಮತ್ತು ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ ಪ್ರಿಯದರ್ಶಿನಿ 2007ರಲ್ಲಿ ವಿವಾಹವಾಗಿದ್ದರು. ದಂಪತಿ ಮಧ್ಯೆ ವೈಮನಸ್ಸು ಉಂಟಾಗಿ ವಿಚ್ಛೇದನ ಪಡೆಯಲು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರಕರಣವು ವಿಚಾರಣೆ ಹಂತದಲ್ಲಿದೆ ಎಂದು ಅವರ ಕುಟು...