ಭಾರತ, ಮಾರ್ಚ್ 1 -- ನವದೆಹಲಿ: ಇಂದು, ಅಂದರೆ ಮಾರ್ಚ್ 1ರ ಶನಿವಾರವಾರದಂದು ಎಲ್‌ಪಿಜಿ ಸಿಲಿಂಡರ್‌ಗಳ ಹೊಸ ದರ (LPG Price 1 March 2025) ಜಾರಿಯಾಗಿದೆ. ಈ ತಿಂಗಳು 19 ಕೆಜಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ ಬೆಲೆಯನ್ನು ಹೆಚ್ಚಿಸಲಾಗಿದೆ. ದೆಹಲಿ ಸೇರಿದಂತೆ ಇತರ ನಗರಗಳಲ್ಲಿ ಸಿಲಿಂಡರ್ ಬೆಲೆಯನ್ನು 6 ರೂ. ಹೆಚ್ಚಿಸಲಾಗಿದೆ. ಕಳೆದ ತಿಂಗಳ ಬಜೆಟ್ ಸಮಯದಲ್ಲಿ, 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 7 ರೂ.ಗಳಷ್ಟು ಕಡಿಮೆ ಮಾಡಲಾಗಿತ್ತು. ಈಗ, ಹೊಸ ತಿಂಗಳು ಬರುತ್ತಿದ್ದಂತೆಯೇ ಪರಿಹಾರವನ್ನು ಹಿಂಪಡೆಯಲಾಗಿದೆ.‌

ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನದಂದು LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸುತ್ತವೆ. ಸದ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಏರಿಕೆಯಿಂದಾಗಿ ಜನರ ಮಾಸಿಕ ಬಜೆಟ್ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸದ್ಯ ಸಿಲಿಂಡರ್‌ 6 ರೂಪಾಯಿಗಳಷ್ಟು ದುಬಾರಿಯಾಗಿದೆ. ಆದರೆ, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಮಾರ್ಚ್‌ ತಿಂಗಳ ಬೆಲೆ ಪ್ರವೃತ್ತಿಯನ...