ಭಾರತ, ಫೆಬ್ರವರಿ 2 -- ಇತ್ತೀಚಿನ ದಿನಗಳಲ್ಲಿ ಅತಿಯಾದ ಒತ್ತಡವು ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತಿದೆ. ಇದರೊಂದಿಗೆ ಕೆಲಸದ ಅವಧಿ ಹೆಚ್ಚಿಸುವ ಬಗ್ಗೆಯೂ ಕೆಲವು ಪ್ರಸಿದ್ಧ ಕಂಪನಿಯ ಮುಖ್ಯಸ್ಥರು ಮಾತನಾಡುತ್ತಿದ್ದಾರೆ. ಈ ನಡುವೆ ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆಯು ವಾರಕ್ಕೆ 60 ಗಂಟೆಗಿಂತ ಹೆಚ್ಚು ಕೆಲಸ ಮಾಡುವುದು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮವನ್ನು ಉಂಟು ಮಾಡಬಹುದು ಎಂದು ಅಧ್ಯಯನಗಳನ್ನು ಹೇಳಿದ್ದನ್ನು ಉಲ್ಲೇಖಿಸಿದೆ.

ಲಾರ್ಸೆನ್ & ಟೂಬ್ರೊ (ಎಲ್ &ಟಿ) ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಸ್ ಎನ್ ಸುಬ್ರಹ್ಮಣ್ಯನ್ ನೌಕರರು ಭಾನುವಾರ ಮನೆಯಲ್ಲಿ ಕುಳಿತುಕೊಳ್ಳುವ ಬದಲು ಆ ದಿನವೂ ಸೇರಿ ವಾರಕ್ಕೆ 90 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿರುವುದು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದಾಗಿ ಕೆಲವು ವಾರಗಳ ಬಳಿಕ ಆರ್ಥಿಕ ಸಮೀಕ್ಷೆಯ ಕೆಲಸದ ಸಮಯದ ಬಗ್ಗೆ ನಿಲುವು ಸ್ಪಷ್ಟಪಡಿಸಿದೆ.

ಎನ್‌&ಟಿ ಅಧ್ಯಕ್ಷರ ಮಾತಿಗೆ ಧ್ವನಿಗೂಡಿಸಿದ್ದ ಇನ್ಫೋಸಿಸ್ ಸಹ-ಸ...