Bengaluru, ಮೇ 17 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 18ರ ಭಾನುವಾರದಿಂದ 24ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಕುಟುಂಬಕ್ಕೆ ಸೇರಿದ ಭೂ ವಿವಾದವೊಂದು ಪರಿಹಾರಗೊಳ್ಳಲಿದೆ. ದೊರೆಯುವ ಫಲಿತಾಂಶದ ಬಗ್ಗೆ ಯೋಚಿಸದೆ ಏಕಾಗ್ರತೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಕುಟುಂಬದಲ್ಲಿ ಗಂಭೀರದ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಕೆಲವೊಂದು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಆತ್ಮೀಯರಿಂದ ಹಣದ ಸಹಾಯ ದೊರೆಯಲಿದೆ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಉದ್ಯೋಗದಲ್ಲಿ ಯಾವುದೇ ಸಮಸ್ಯೆ ಎದುರಾಗದು. ಹಾಗೆಯೇ ದೊರೆಯಬ...