Bengaluru, ಏಪ್ರಿಲ್ 19 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 20ರ ಭಾನುವಾರದಿಂದ 26ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಆಹಾರ ಸೇವನೆಯಲ್ಲಿ ಇತಿ ಮಿತಿಯನ್ನು ಅನುಸರಿಸುವಿರಿ. ಇದರಿಂದ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ತಪ್ಪು ನಿರ್ಧಾರದ ಕಾರಣದಿಂದಾಗಿ ವರಮಾನದಲ್ಲಿ ಹಿನ್ನೆಡೆ ಉಂಟಾಗುತ್ತದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ಉದ್ಯೋಗದಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಸ್ವಂತ ಕೆಲಸ ಕಾರ್ಯ...