Bengaluru, ಜೂನ್ 15 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 15ರ ಭಾನುವಾರದಿಂದ 21ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ನಿಮ್ಮಲ್ಲಿನ ನೇರವಾದ ನಡೆ ನುಡಿ ಎಲ್ಲರ ಬೇಸರಕ್ಕೆ ಕಾರಣವಾಗುತ್ತದೆ. ಸ್ನೇಹ ಪೀತಿಯಿಂದ ಸಹೋದ್ಯೋಗಿಗಳ ವಿಶ್ವಾಸವನ್ನು ಗಳಿಸುವಿರಿ. ಹಣಕಾಸಿನ ವಿಚಾರದಲ್ಲಿ ಕುಟುಂಬದವರ ಸಹಕಾರ ಲಭಿಸುತ್ತದೆ. ಉದ್ಯೋಗದಲ್ಲಿ ಹೊಸ ಅವಕಾಶಗಳು ನಿಮ್ಮದಾಗುತ್ತದೆ. ಜೀವನದಲ್ಲಿ ಒಂಟಿಯಾಗಿ ಯಶಸ್ಸು ಕಾಣಲು ಸಾಧ್ಯವಾಗದೆಂಬ ಸತ್ಯವನ್ನು ಅರಿಯುವಿರಿ. ವಿದ್ಯಾರ್ಥಿಗಳು ತದೇಕ ಚಿತ್ತದಿಂದ ವಿದ್ಯಾಭ್ಯಾಸದಲ್ಲಿ ಮುಂದುವರೆಯುತ್ತಾರೆ. ಸ್ವಂತ ವ್ಯಾ...