Bengaluru, ಏಪ್ರಿಲ್ 4 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರಿಗೆ 2025ರ ಮಾರ್ಚ್ 30 ರಿಂದ ಏಪ್ರಿಲ್ 5ರ ಶನಿವಾರದ ವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಬಿಡುವಿಲ್ಲದ ಕೆಲಸದ ಕಾರಣ ದೇಹಾಲಸ್ಯ ಉಂಟಾಗುತ್ತದೆ. ಸತತ ಕೆಲಸದ ನಡುವೆಯೂ ವಿಶ್ರಾಂತಿಯ ಅಗತ್ಯ ಕಂಡುಬರುತ್ತದೆ. ಪ್ರತಿಯೊಂದು ಸಂದರ್ಭಕ್ಕೂ ಹೊಂದಿಕೊಳ್ಳುವ ಗುಣವಿರುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಿಸುವುದಿಲ್ಲ. ಜೀವನದಲ್ಲಿ ಅನೇಕ ಬದಲಾವಣೆಗಳು ಉಂಟಾಗಲಿವೆ. ಎಲ್ಲರೊಂದಿಗೆ ಹೊಂದಿಕೊಂಡು ಬಾಳುವಿರಿ. ಶಾಂತಿ ನೆಮ್ಮದಿಯಿಂದ ಜೀವನ ನಡೆಸುವಿರಿ. ಹಣಕಾಸಿನ ವಿಚಾರದಲ್ಲಿ ...