Bengaluru, ಮೇ 17 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 18ರ ಭಾನುವಾರದಿಂದ 24ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಟಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಬಹು ದಿನಗಳ ನಂತರ ಉತ್ತಮ ಆರೋಗ್ಯವನ್ನು ಗಳಿಸುವಿರಿ. ಬಿಡುವಿಲ್ಲದ ಕೆಲಸ ಕಾರ್ಯದ ನಡುವೆಯೂ ಕುಟುಂಬದ ಸದಸ್ಯರನ್ನು ಪ್ರೀತಿಯಿಂದ ಕಾಣುವಿರಿ. ಉದ್ಯೋಗವನ್ನು ಬದಲಿಸುವ ಸೂಚನೆಗಳಿವೆ. ಹಣಕಾಸಿನ ವಿಚಾರದಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಮನೆಯನ್ನು ನವೀಕರಣಗೊಳಿಸಲು ಆರ್ಕಷಕ ವಸ್ತುಗಳನ್ನು ಕೊಳ್ಳುವಿರಿ. ಕುಟುಂಬದಲ್ಲಿ ನೆಲೆಸಿದ್ದ ಮನಸ್ತಾಪವು ದೂರವಾಗುತ್ತದೆ. ಕಷ್ಟ ಎನಿಸಿದರು ಹಣವನ್ನು ಉಳಿಸುವಿರಿ. ಮನೆತನದ...