ಭಾರತ, ಏಪ್ರಿಲ್ 26 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 27 ರ ಭಾನುವಾರದಿಂದ ಮೇ 3 ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ

ದೃಢವಾದ ನಿರ್ಧಾರಗಳಿಂದ ಉತ್ತಮ ಆರೋಗ್ಯವನ್ನು ಗಳಿಸುವಿರಿ. ಬಹುದಿನಗಳಿಂದ ಇದ್ದ ಅನಾರೋಗ್ಯಕ್ಕೆ ಸೂಕ್ತ ಪರಿಹಾರ ದೊರೆಯಲಿದೆ. ಬಹು ದಿನಗಳ ಹಿಂದಿನಿಂದ ನಿಮಗೆ ಸಂದಾಯವಾಗಬೇಕಿದ್ದ ಹಣವು ಈ ವಾರದಲ್ಲಿ ನಿಮ್ಮ ಕೈ ಸೇರಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ಗಳಿಸುವುವಿರಿ. ರಕ್ತಕ್ಕೆ ಸಂಬಂಧಿಸಿದ ದೋಷವಿದ್ದರೆ ಎಚ್ಚರಿಕೆ ಇರಲಿ. ಕುಟುಂಬದ ಜವಾಬ್ದಾರಿಗಳ...