ಭಾರತ, ಮಾರ್ಚ್ 9 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರಿಗೆ 2025ರ ಮಾರ್ಚ್ 9 ರಿಂದ 15ರ ವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ವ್ಯವಸಾಯಕ್ಕೆ ಸಂಬಂಧಿಸಿದ ವಿಚಾರದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಬಡವರಿಗೆ ಆಹಾರದ ವ್ಯವಸ್ಥೆ ಮಾಡುವಿರಿ. ಒಂದಕ್ಕಿಂತಲೂ ಹೆಚ್ಚಿನ ಆದಾಯ ನಿಮ್ಮದಾಗುತ್ತದೆ. ಪಾಲುಗಾರಿಕೆಯ ವ್ಯವಹಾರದಲ್ಲಿ ನಂಬಿಕೆ ಇರುತ್ತದೆ. ಗುರು ಹಿರಿಯರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉನ್ನತ ಸ್ಥಾನವನ್ನು ಗಳಿಸುತ್ತಾರೆ. ಕುಟುಂಬದ ಹೆಚ್ಚಿನ ಜವಾಬ್ದಾರಿಯು ನಿಮ್ಮದಾಗುತ್ತದೆ. ಮಕ್ಕಳ ವಿಚಾರದಲ್ಲಿ ಮಾನಸಿಕ ಒತ್ತಡವಿರುತ್ತದೆ. ಅವಶ್ಯಕತೆ ಇದ್ದ...