Bengaluru, ಮಾರ್ಚ್ 28 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರಿಗೆ 2025ರ ಮಾರ್ಚ್ 30 ರಿಂದ ಏಪ್ರಿಲ್ 5 ರವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವುದು ಒಳ್ಳೆಯದು. ಸಣ್ಣಪುಟ್ಟ ಸಮಸ್ಯೆಗಳು ದೊಡ್ಡದಾಗಬಹುದು. ಉದ್ಯೋಗದಲ್ಲಿ ಎದುರಾಗುವ ಸಮಸ್ಯೆಯನ್ನು ಆತ್ಮೀಯರ ಸಹಾಯದಿಂದ ಗೆಲ್ಲುವಿರಿ. ಮನಸ್ಸಿಲ್ಲದೆ ಹೋದರು ಕುಟುಂಬದ ಒಳಿತಿಗಾಗಿ ಪ್ರಯಾಣ ಕೈಗೊಳ್ಳುವಿರಿ. ಶಾಂತಿ ನೆಮ್ಮದಿಯಿಂದ ಜೀವನ ನಡೆಸುವಿರಿ. ಹಣಕಾಸಿನ ವಿಚಾರದಲ್ಲಿ ಮಾನಸಿಕ ಒತ್ತಡವಿರುತ್ತದೆ. ಅನಪೇಕ್ಷಿತ ವಿಚಾರಗಳಿಗೆ ಹಣವನ್ನು ಖರ್ಚು ಮಾಡುವಿರಿ. ಹಣದ ತೊ...