ಭಾರತ, ಏಪ್ರಿಲ್ 19 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 20ರ ಭಾನುವಾರದಿಂದ 26ರ ಶನಿವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಬಿಡುವಿಲ್ಲದ ಕೆಲಸ ಕಾರ್ಯಗಳ ನಡುವೆ ಆರೋಗ್ಯದ ಬಗ್ಗೆ ಗಮನ ನೀಡುವುದಿಲ್ಲ. ಇದರಿಂದ ತೊಂದರೆ ಉಂಟಾಗಬಹುದು, ಎಚ್ಚರಿಕೆ ಇರಲಿ. ಯೋಗಾಭ್ಯಾಸದಿಂದಾಗಿ ಮಾನಸಿಕ ಸ್ಥಿತಿಯನ್ನು ಹಿಡಿತಕ್ಕೆ ತಂದುಕೊಳ್ಳುವಿರಿ. ಮನಸ್ಸಿಗೆ ಇಷ್ಟವೆನಿಸುವ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಆತುರದಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಉತ್ತಮ ಆದಾಯವಿರುತ್ತದೆ. ಆದರೆ ಅನಾವಶ್ಯಕ ಖರ್ಚು ವೆ...