Bengaluru, ಮೇ 3 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 4ರ ಭಾನುವಾರದಿಂದ ಮೇ 10ರ ಶನಿವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಎಲ್ಲರ ಬಗ್ಗೆ ದಯೆ ಮತ್ತು ಅನುಕಂಪ ತೋರುವಿರಿ. ಜೀವನದಲ್ಲಿ ಸಂತೋಷ ನೆಮ್ಮದಿ ನಿಮ್ಮದಾಗಲಿದೆ. ಉದ್ಯೋಗಸ್ಥರಾದಲ್ಲಿ ಸಹೋದ್ಯೋಗಿಗಳ ಸಹಕಾರ ಲಭಿಸುತ್ತದೆ. ಹಣಕಾಸಿನ ತೊಂದರೆ ಕಂಡು ಬರುವುದಿಲ್ಲ. ಯಾರಿಗೂ ತಿಳಿಯದಂತೆ ಭವಿಷ್ಯದ ಜೀವನಕ್ಕಾಗಿ ಹಣವನ್ನು ಉಳಿತಾಯ ಮಾಡುವಿರಿ. ಮನೆಯಲ್ಲಿ ಸೌಹಾರ್ದಯುತ ವಾತಾವರಣ ಇರಲಿದೆ. ಜೀವನದಲ್ಲಿನ ಬದಲಾವಣೆಗಳಿಗೆ ಹೊಂದಿಕೊಳ್ಳುವ ಕಾರಣ ಶಾಂತಿ ನೆಮ್ಮದಿಯಿಂದ ಬಾಳುವಿರಿ. ವಿದ...