Bengaluru, ಏಪ್ರಿಲ್ 12 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 13ರ ಭಾನುವಾರದಿಂದ 19ರ ಶನಿವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಬಿಡುವಿಲ್ಲದೆ ಕೆಲಸ ನಿರ್ವಹಿಸಬೇಕಾಗುತ್ತದೆ. ಇದರಿಂದಾಗಿ ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ. ಮಾನಸಿಕ ಖಿನ್ನತೆ ಇರುತ್ತದೆ. ಕುಟುಂಬದಲ್ಲಿ ಸಂತೋಷದ ಕ್ಷಣಗಳು ಇರಲಿವೆ. ಮಾನಸಿಕವಾಗಿ ಸದೃಢರಾಗಿರಾಗುತ್ತೀರಿ. ಉದ್ಯೋಗದ ವಿಷಯದಲ್ಲಿ ನಿಮ್ಮಲ್ಲಿರುವ ಪ್ರತಿಭೆಗೆ ತಕ್ಕ ಅವಕಾಶ ಮತ್ತು ಪ್ರತಿಫಲ ದೊರೆಯುತ್ತದೆ. ಮನದಲ್ಲಿಯೇ ಯೋಚಿಸಿದ ನಂತರ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಆತ್ಮೀಯರ ಸಲುವಾಗಿ ಹಣ ವೆಚ್ಚವಾಗುತ...