ಭಾರತ, ಏಪ್ರಿಲ್ 26 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 27ರ ಭಾನುವಾರದಿಂದ ಮೇ 3ರ ಶನಿವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಸದಾಕಾಲ ಚುರುಕುತನದಿಂದ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರುವುದಿಲ್ಲ. ನಿಮ್ಮ ಇಚ್ಛೆಗೆ ಸರಿ ಹೊಂದುವ ಕೆಲಸ ಕಾರ್ಯಗಳು ದೊರೆಯುತ್ತವೆ. ಕುಟುಂಬದಲ್ಲಿ ಹಿರಿಯರ ಮಾತಿಗೆ ಎಲ್ಲರೂ ಗೌರವ ನೀಡಬೇಕಾಗುತ್ತದೆ. ಇದರಿಂದಾಗಿ ಕುಟುಂಬದಲ್ಲಿ ಶಾಂತಿ ನೆಮ್ಮದಿ ನಲೆಸಿರುತ್ತದೆ. ಆರೋಗ್ಯದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂ...