ಭಾರತ, ಜೂನ್ 8 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 8ರ ಭಾನುವಾರದಿಂದ 14ರ ಶನಿವಾರದವರಿಗೆ ಮೇಷ, ವೃಶಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಕಾಣಲಿದೆ. ನಿಮ್ಮ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ನಿಮ್ಮಲ್ಲಿನ ಆತ್ಮವಿಶ್ವಾಸ ಮಾನಸಿಕ ಒತ್ತಡವನ್ನು ದೂರ ಮಾಡುತ್ತದೆ. ದೈಹಿಕ ವ್ಯಾಯಾಮದ ಅವಶ್ಯಕತೆ ಬಹಳಷ್ಟಿದೆ. ಅನಿರೀಕ್ಷಿತ ಧನಲಾಭ ಇರುತ್ತದೆ. ಕೌಟುಂಬಿಕ ವಿಚಾರಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತದೆ. ವಾಹನ ಚಾಲನೆಯ ವೇಳೆ ಜಾಗರೂಕತೆ ಇರಲಿ. ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಿರಿ. ನಿಮ್ಮ ಸ್ವಾರ್ಥರಹಿತ ಭಾವನೆಯಿಂದ ಕುಟ...