ಭಾರತ, ಮಾರ್ಚ್ 15 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರಿಗೆ 2025ರ ಮಾರ್ಚ್ 16 ರಿಂದ 22ರ ವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಅನಾವಶ್ಯಕ ಓಡಾಟವಿರುತ್ತದೆ. ಮನದಲ್ಲಿ ಯಾವುದೇ ಗುಟ್ಟಿನ ವಿಚಾರಗಳು ದೈಹಿಕವಾಗಿ ದುರ್ಬಲಗೊಳಿಸುತ್ತವೆ. ಅತಿಯಾದ ಧೈರ್ಯವಿರುತ್ತದೆ. ಸೋದರ ಸೋದರಿಯರ ನಡುವೆ ಉತ್ತಮ ಅನುಬಂಧ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅನೇಕ ಬದಲಾವಣೆಗಳು ಕಂಡುಬರುತ್ತವೆ. ಬೇರೆಯವರ ಕೆಲಸ ಕಾರ್ಯದಲ್ಲಿಯೂ ಆಸಕ್ತಿ ವಹಿಸುವಿರಿ. ಬಂಧು ಬಳಗದವರಿಂದ ದೂರ ಉಳಿಯುವಿರಿ. ಬರವಣಿಗೆಯಲ್ಲಿ ಹೆಚ್ಚಿನ ಆಸಕ್ತಿ ಇರುತ್ತದೆ. ಡಾಂಬಿಕ ಜೀವನ ಇಷ್ಟಪ...